ನವದೆಹಲಿ: ಹಲವು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿರುವ ಆರೋಪ ಹೊತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.
ಕಿಡ್ನ್ಯಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ (SIT) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್ ನೀಡಿದೆ. ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ಭವಾನಿ ಅವರಿಂದ ಪ್ರತಿಕ್ರಿಯೆ ಕೋರಿದೆ. ಸಿಬಲ್ ಅವರ ವಾದವನ್ನು ಆಲಿಸಿದ ನಂತರ, ನ್ಯಾಯಪೀಠವು ಮೌಖಿಕವಾಗಿ ಗಮನಿಸಿತು, “ಪ್ರತಿವಾದಿಯ ವಿರುದ್ಧದ ಪ್ರಕರಣದಲ್ಲಿ ಏನೂ ಇಲ್ಲ, ನಾವು ಈ ವಿಷಯವನ್ನು ರಾಜಕೀಯಗೊಳಿಸಬಾರದು” ಎಂದು ಹೇಳಿದರು.