ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಹಾಗೂ ಲೋಕಾಯುಕ್ತರಿಗೆ ಸುಪ್ರೀಂ ಕೋರ್ಟ್ ಮಂಗಳವಾರದಂದು ನೋಟಿಸ್ ಜಾರಿಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಲಾಗಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನಾಯಾಯಮೂರ್ತಿ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಇನ್ನೂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ. ಆರಂಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಪೀಠವು ಇದು ರಾಜ್ಯ, ಸಿಬಿಐ ನಡುವಿನ ವಿಯಷವಾಗಿರುವುದರಿಂದ ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಹೇಗೆ ಅವಕಾಶ ಇದೆ ಎಂಬುದಾಗಿ ಪ್ರಶ್ನಿಸಿತ್ತು.
BREAKING: ಹಾವೇರಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ