ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಈ ನಡುವೆ ರಾಜ್ಯಪಾಲರ ವಿಚಾರಣೆಯನ್ನೇ ಪ್ರಶ್ನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದ್ದು, ಇಂದೇ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಕಾಂಗ್ರೆಸ್ ಸಜ್ಜಾಗಿದೆ. ಇಂದು ಬೆಂಗಳೂರಿಗೆ ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ಕಪಿಲ್ ಸಿಬಲ್ ಆಗಮಿಸಲಿದ್ದು, ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ.