ನವದೆಹಲಿ: ಹೊಸದಾಗಿ ನೇಮಕಗೊಂಡ ಇಬ್ಬರು ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಭಾರತದ ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆ 2024 ರ ವೇಳಾಪಟ್ಟಿಯನ್ನು ರಾಜ್ಯ ವಿಧಾನಸಭೆಗಳೊಂದಿಗೆ ಪ್ರಕಟಿಸಲಿದೆ.
ಇದೇ ಹೊತ್ತಿನಲ್ಲಿ ಚುನಾವಣಾ ಆಯೋಗಕ್ಕೆ ಇಬ್ಬರನ್ನು ಹೊಸದಾಗಿ ಚುನಾವಣಾ ಆಯೋಕ್ತರನ್ನಾಗಿ ನೇಮಿಸಿದ್ದಂತ ನೇಮಕಾತಿಗೆ ತಡೆ ನೀಡಲು ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಅಲ್ಲದೇ ಇಬ್ಬರು ಹೊಸ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅಂದಹಾಗೇ ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಭಾರತದ ಚುನಾವಣಾ ಆಯೋಗದ (Election Commission) ಉನ್ನತ ಸಮಿತಿಯಲ್ಲಿ ಖಾಲಿ ಇರುವ ಎರಡು ಹುದ್ದೆಗಳಿಗೆ ಅಧಿಕಾರಿಗಳಾದ ಸುಖ್ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
BREAKING : ಭೂಪಾಲ್ ನ ‘ಟೆಂಟ್ ಹೌಸ್’ ಗೋದಾಮಿನಲ್ಲಿ ‘ಸಿಲಿಂಡರ್’ ಸ್ಫೋಟದಿಂದ ಭಾರಿ ಅಗ್ನಿ ಅವಘಡ
ಕೇಂದ್ರದ ‘ಅನುದಾನ’ ತಾರತಮ್ಯದಿಂದ ರಾಜ್ಯಕ್ಕೆ ‘ಆರ್ಥಿಕ ಸವಾಲು’ಗಳು ಎದುರಾಗಿವೆ : ಕೃಷ್ಣ ಭೈರೇಗೌಡ ಆಕ್ರೋಶ