ಬೆಂಗಳೂರು: ಕರ್ನಾಟಕ ಹೈಕೋರ್ಟ್ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ( Chamarajpete Edga Maidhana ) ಗಣೇಶೋತ್ಸವಕ್ಕೆ ( Ganesh Fastival ) ಅನುಮತಿ ನೀಡಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ವಕ್ಫ್ ಬೋರ್ಡ್ ನಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ( Supreme Court ) ನ್ಯಾಯಪೀಠವು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ಈ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ.
ಸುಪ್ರೀಂ ಕೋರ್ಟ್ ನಿಂದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದಂತ ವಿಚಾರ ಸಂಬಂಧ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಲಾಯಿತು. ವಕ್ಫ್ ಬೋರ್ಡ್ ಪರವಾಗಿ ಕಪೀಲ್ ಸಿಬಲ್ ಹಾಗೂ ಕರ್ನಾಟಕ ಸರ್ಕಾರದ ಪರವಾಗಿ ತುಷಾರ್ ಮಹ್ತಾ ವಾದ, ಪ್ರತಿವಾದ ಮಂಡಿಸಿದರು.
ನಿರುದ್ಯೋಗಿ ಯುವಕ, ಯುವತಿಯರಿಗೆ ಮುಖ್ಯ ಮಾಹಿತಿ : `PMEGP’ ಯೊಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಈ ಎರಡೂ ವಾದವನ್ನು ಆಲಿಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ಹೀಗಾಗಿ ಚಾಮರಾಜಪೇಟೆಯ ಈದ್ಗಾ ಮೈದಾನಲ್ಲಿ ಇದೇ ಮೊದಲ ಬಾರಿಗೆ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಂತೆ ಆಗಿದೆ.
ಮತ್ತೊಂದೆಡೆ ಸುಪ್ರೀಂ ಕೋರ್ಟ್ ತೀರ್ಪಿನ ಕಾರಣದಿಂದಾಗಿ ಮೈದಾನದ ಸುತ್ತಾ ಮುತ್ತಾ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಲಕ್ಷ್ಮಣ್ ನಿಂಬರಗಿ ನೇತೃತ್ವದಲ್ಲಿ 1600ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಮೈದಾನದ ಎಲ್ಲೆಡೆ ಖಾಕಿ ಹೈ ಅಲರ್ಟ್ ಆಗಿದೆ.