ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡ್, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ… pic.twitter.com/XmHp1VLTf4
— DIPR Karnataka (@KarnatakaVarthe) October 25, 2024
ಅರ್ಜಿಯೊಂದಿಗೆ ಮಾಧ್ಯಮ ಮಾನ್ಯತಾ ಕಾರ್ಡ್‌ನ ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಬೇಕು. ಜೊತೆಗೆ ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‌ಗಳನ್ನು ಪಡೆದಿರುವುದಿಲ್ಲ ಎಂದು ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.
ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯನ್ನು ನವೆಂಬರ್ 10, ಸಂಜೆ 5ರ ಒಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು.
BIG NEWS: ರಾಜ್ಯದಲ್ಲಿ 3-4 ದಿನಗಳಲ್ಲಿ ಬೆಳೆಹಾನಿ ಸಮೀಕ್ಷೆ ಪೂರ್ಣ, 15 ದಿನಗಳಲ್ಲಿ ಪರಿಹಾರ: ಸಚಿವ ಕೃಷ್ಣಬೈರೇಗೌಡ
ಬೆಂಗಳೂರು ಜನತೆಗೆ ಗಮನಕ್ಕೆ: ಅ.27ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut