ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 1ನೇ ತರಗತಿಯಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನವೀನ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ಒಡನಾಡಿ ಸಂಸ್ಥೆಯ ನಾಲ್ವರು ಸಿಬ್ಬಂದಿ ಪೊಲೀಸ್ ವಶಕ್ಕೆ , ವಿಚಾರಣೆ
ತೀರ್ಥಹಳ್ಳಿ ತಾಲ್ಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ www.sw.kar.nic.inಇಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-2 ಸಮಾಜ ಕಲ್ಯಾಣ ಇಲಾಖೆ, ತೀರ್ಥಹಳ್ಳಿ ತಾಲ್ಲೂಕು, ದೂ.ಸಂ: 9480843196 ನ್ನು ಸಂಪರ್ಕಿಸಬಹುದೆಂದು ತೀರ್ಥಹಳ್ಳಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-2 ತಿಳಿಸಿದ್ದಾರೆ.