ಚಿತ್ರದುರ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಅನುಷ್ಠಾನಗೊಳಿಸಿರುವ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿ.08 ಅರ್ಜಿ ಸಲ್ಲಿಸಲು ಕೊನೆಯ ದಿನ.
ಎಸ್‍ಎಸ್‍ಎಲ್‍ಸಿ ಪಾಸ್, ಫೇಲ್ ಆದ 16 ರಿಂದ 40 ವರ್ಷ ವಯೋಮಿತಿಯವರಿಗೆ ಡಿಸೆಂಬರ್ 10 ರಿಂದ 17 ರವರೆಗೆ ಬೆಂಗಳೂರಿನಲ್ಲಿ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ನಡೆಯಲಿದೆ.
ತರಬೇತಿ ಶಿಬಿರಕ್ಕೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿಯ ಯುವ ಜನರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು ಇದೇ ಡಿ.08ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ತರಬೇತಿ ಶಿಬಿರಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಈ ಶಿಬಿರದಲ್ಲಿ ಭಾಗಹಿಸುವವರಿಗೆ ಸಾಮಾನ್ಯ ವಸತಿ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635ಗೆ ಮತ್ತು ಸಹಾಯವಾಣಿ ಸಂಖ್ಯೆ 155265 ಹಾಗೂ ಮೊಬೈಲ್ 9731251411 ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
BREAKING: ಕುಣಿಗಲ್ ಶಾಸಕ ಡಾ.ರಂಗನಾಥ್ ತಂದೆ ಡಾ.ಹೆಚ್.ಆರ್.ದೊಡ್ಡಯ್ಯ ನಿಧನ: ಸಿಎಂ, ಡಿಸಿಎಂ ಸಂತಾಪ
BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ