ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ (ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಸೇರಿದಂತೆ) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಮೆರಿಟ್ ಮತ್ತು ಕೌನ್ಸೆಲಿಂಗ್ ಮೂಲಕ ಈ ಆಯ್ಕೆಯನ್ನು ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ dce.karnataka.gov.in ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.









