ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತ ಸಮುದಾಯದ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಗಳಿಗೆ ಮುಖ್ಯ ಮಾಹಿತಿ… ಪ್ರಸಕ್ತ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ( vidyasiri Scholarship ) ಅರ್ಜಿ ಸಲ್ಲಿಸಲು ನ.15 ಕೊನೆಯ ದಿನಾಂಕವಾಗಿತ್ತು.
ನಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಿ ಅಲ್ಪಸಂಖ್ಯಾತರ ಕಲ್ಯಾಣ ನಿಗಮ ಆದೇಶ ಹೊರಡಿಸಿದೆ.
ಮನೆಯಿಂದ ಕಾಲೇಜಿಗೆ 5 ಕಿ. ಮೀ. ದೂರ ಇರುವ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು.
* ಎಸ್. ಎಸ್. ಎಲ್. ಸಿ. ಅಂಕಪಟ್ಪಿ
* ಪಿಯುಸಿ / ಸೆಮಿಸ್ಟರ್ ಅಂಕಪಟ್ಪಿ
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಪುಸ್ತಕ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ದೂರ ದೃಢೀಕರಣ ಪತ್ರ.
* ಪಾಸ್ಪೋರ್ಟ್ ಅಳತೆಯ ಭಾವಚಿತ್ರ 1
* ಶಾಲಾ ಶುಲ್ಕದ ರಶೀದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/11/2022 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಭೇಟಿ ನೀಡಬಹುದಾಗಿದೆ.
BIGG NEWS : ‘ಕರ್ನಾಟಕದ ಒಂದಿಂಚೂ ಜಾಗ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ’ : ಸಿಎಂ ಬೊಮ್ಮಾಯಿ ಗುಡುಗು
ಮತದಾರರ ಮಾಹಿತಿ ಸೋರಿಕೆ ಪ್ರಕರಣ : ಇಂದು ಬೆಂಗಳೂರಿಗೆ ಉಪ ಚುನಾವಣಾ ಆಯುಕ್ತರ ಭೇಟಿ