ಚಿಕ್ಕಮಗಳೂರು : B.Ed , D.ED ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಬಗ್ಗೆ ನಿರ್ದೇಶಕರು ಅಲ್ಪಸಂಖ್ಯಾತರ ನಿರ್ದೇಶನಾಲಯ ಸೂಚನೆ ನೀಡಿದ್ದು , 2022-23 ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಿ. ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 25000 ರೂ ಪ್ರೋತ್ಸಾಹ ಧನ ನೀಡಲಾಗುತ್ತದೆ.
BIGG NEWS : ಕಾರು ಅಲ್ಲಾಡಿಸಿದಕ್ಕೆ ಕರಾವಳಿಗರ ಮೇಲೆ ಸೇಡು ತೀರಿಸಿಕೊಂಡಿರಾ? ಸಂಸದರಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ
ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು 10:12:2022 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕು ಅಲ್ಪಸಂಖ್ಯಾತ ಕಲ್ಯಾಣ ನಿಗಮವನ್ನು ಸಂಪರ್ಕಿಸಬಹುದಾಗಿದೆ.
ಸಿದ್ದರಾಮಯ್ಯರಿಗೆ ‘ಡಿಕೆಶಿ’ ಕೊನೆಗೆ ಟಿಕೆಟ್ ಆದ್ರೂ ಕೊಡ್ತಾರಾ? : ಟ್ವೀಟ್ ನಲ್ಲಿ ಬಿಜೆಪಿ ವ್ಯಂಗ್ಯ