ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : NSP(NATIONAL SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ SSP(STATE SCHOLARSHIP PORTAL) ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ.
2021-22 ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನಕ್ಕೆ (SSP) ಅರ್ಜಿ ಆಹ್ವಾನಿಸಲಾಗಿದ್ದು,. ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ (NSP) ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ 31/03/2022 ರ ಒಳಗೆ ಅರ್ಜಿ ಸಲ್ಲಿಸಬೇಕು.. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಅಲ್ಪಸಂಖ್ಯಾತರ ನಿಗಮಕ್ಕೆ ಭೇಟಿ ನೀಡಲು ಪ್ರಕಟಣೆ ಹೊರಡಿಸಿದೆ.
ಮೆಟ್ರಿಕ್ ನಂತರದ ಅಲ್ಪಸಂಖ್ಯಾತ ಸಮುದಾಯದ ಜೈನರು, ಮುಸ್ಲಿಂ, ಕ್ರಿಶ್ವಿಯನ್, ಸಿಖ್, ಪಾರಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿತ್ತು.
2021 ರಲ್ಲಿ ಹವಾಮಾನ ವೈಪರೀತ್ಯದಿಂದ 1,750 ಮಂದಿ ಬಲಿ: ಇಲ್ಲಿದೆ ರಾಜ್ಯವಾರು ಪಟ್ಟಿ