ಬೆಂಗಳೂರು: ರಾಯಚೂರಲ್ಲಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಉಂಟಾಗಿತ್ತು. ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೇ, ನಾಲ್ವರ ಕಾಲು ಕಟ್ ಆಗಿತ್ತು. ಅಲ್ಲದೇ ಹಲವರು ಗಾಯಗೊಂಡಿದ್ದರು. ಇಂತವರಿಗೆ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸಾ ವ್ಯವಸ್ಥೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದು ಹೇಳಿದ್ದಾರೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು.
ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ… pic.twitter.com/M3HeNutVvC
— CM of Karnataka (@CMofKarnataka) September 5, 2024
ಭಾಗ್ಯಲಕ್ಷ್ಮಿ ಯೋಜನೆಯ ‘ಸೀರೆ ವಿತರಣೆ’ಯಲ್ಲಿ ಅಕ್ರಮ: ‘SIT ತನಿಕೆ’ಗೆ ಕೋರಿ ಸಿಎಂಗೆ ‘ರಮೇಶ್ ಬಾಬು’ ಪತ್ರ
ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’