ಬೆಂಗಳೂರು: ಫೆಬ್ರವರಿ.28ರಂದು ರಾಷ್ಟ್ರೀಯ ವಿಜ್ಞಾನ ದಿನದಂದು ಪ್ರತಿಜ್ಞಾ ವಿಧಿಯನ್ನು ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸ್ವೀಕರಿಸುವುದು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವತ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು, ಫೆಬ್ರವರಿ.28, 2024ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏಕಕಾಲಕ್ಕೆ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ಪ್ರತಿಜ್ಞಾ ವಿಧಿಯನ್ನು ಎಲ್ಲಾ ವಿದ್ಯಾರ್ಥಿಗಳು ಸ್ವೀಕರಿಸುವಂತೆ ಕ್ರಮ ಕೈಗೊಳ್ಳಲು ಆದೇಶಿಸಿದೆ.
ಒಟ್ಟಾರೆಯಾಗಿ ಸಂವಿಧಾನ ಪೀಠಿಕೆ ಓದಿನ ಬಳಿಕ, ಈಗ ಫೆಬ್ರವರಿ.28ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಏಕಕಾಲಕ್ಕೆ ಪ್ರತಿಜ್ಞಾ ವಿಧಿಯನ್ನು ಎಲ್ಲಾ ವಿದ್ಯಾರ್ಥಿಗಳು ತೆಗೆದುಕೊಳ್ಳುವಂತೆ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಮಾಡಿದೆ.