ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಬೇಸಿಗೆ ರಜಾ ಅವಧಿಯಲ್ಲೂ ತರಗತಿ ನಡೆಸುತ್ತಿರೋ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಿದೆ. ಅದೇನು ಅಂತ ಮುಂದೆ ಓದಿ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ.
ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗಧಿಯಾದಂತೆ ಶೈಕ್ಷಣಿಕ ರಜೆಯನ್ನು ಮುಂದುವರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ.
ಪರಿಶೀಲಿಸಲಾಗಿ, ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ ಶಾಲಾ ಚಟುವಟಿಕೆಗಳನ್ನು ಸೇರಿದಂತೆ ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದ ಅದರಂತೆ ಶಾಲೆಗಳನ್ನು ಪ್ರಾರಂಭಿಸಿ ಮುಂದುವರೆಸಲು ಕ್ರಮವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರುಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ ಖರ್ಚಾದ ‘ಹಣ’ ಎಷ್ಟು ಗೊತ್ತಾ.? ಇಲ್ಲಿದೆ ಮಾಹಿತಿ
BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ