ಬೆಂಗಳೂರು : ರಾಜ್ಯದ ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯ ನೀಡುವ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ದಿನಾಂಕ: 22.01.2024 ರ ಸರ್ಕಾರದ ಪತ್ರದಲ್ಲಿ ಅನುದಾನಿತ ಪ್ರೌಢ ಶಾಲಾ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಿದಲ್ಲಿ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು ಅನುದಾನಿತ ಶಾಲಾ ಮಹಿಳಾ ನೌಕರರಿಗೆ ಶಿಶುವಾಲನೆ ರಜೆ ಮಂಜೂರು ಮಾಡುವ ಬಗ್ಗೆ ಕ್ರಮ ವಹಿಸುವಂತೆ ತಿಳಿಸಲಾಗಿದೆ.

ಸದರಿ ಪತ್ರವನ್ನು ಈ ಪತ್ರದೊಂದಿಗೆ ಅನುಬಂಧಿಸಿ ಕಳುಹಿಸುತ್ತಾ ಸರ್ಕಾರದ ಪತ್ರದಲ್ಲಿ ತಿಳಿಸಿರುವಂತೆ ಕ್ರಮ ವಹಿಸಲು ತಿಳಿಸಿದೆ.

 

Share.
Exit mobile version