ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ( Bangalore ) ಶಾಲೆಯಲ್ಲಿ  ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.

ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ  ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಶಿಕ್ಷಕನ ಹೊಡೆತಕ್ಕೆ ಮೊದಲ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ  ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಈ ಸಂಬಂಧ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

‘ಬಸವಲಿಂಗ ಶ್ರೀ’ ಆತ್ಮಹತ್ಯೆ ಪ್ರಕರಣ : ಆರೋಪಿಗಳ ಕಸ್ಟಡಿ ಅಂತ್ಯ, ನಾಳೆ ಕೋರ್ಟ್ ಗೆ ಹಾಜರು

BIGG NEWS : ನೂತನ ಜಿಲ್ಲೆ ವಿಜಯನಗರದ ಜಿಲ್ಲಾಧಿಕಾರಿ, ‘SP’ ಬದಲಾವಣೆ : ರಾಜ್ಯ ಸರ್ಕಾರದಿಂದ ಆದೇಶ

‘ಸಾವಿನ ಮನೆಯಲ್ಲಿ ಸಿದ್ದರಾಮಯ್ಯ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ’ : ಸರಣಿ ಟ್ವೀಟ್ ಮೂಲಕ ಸಚಿವ ಸುಧಾಕರ್ ವಾಗ್ಧಾಳಿ

Share.
Exit mobile version