ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಕೀಚಕ ಕೃತ್ಯವೊಂದು ಬೆಳಕಿಗೆ ಬಂದಿದೆ. 7ನೇ ತರಗತಿ ಓದುತ್ತಿದ್ದಂತ ಅಪ್ರಾಪ್ತ ಬಾಲಕಿಯ ಮೇಲೆ ಸಂಬಂಧಿಕರೊಬ್ಬರೇ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕೆ ಶಾಲಾ ಬಾಲಕಿ 6 ತಿಂಗಳ ಗರ್ಭಿಣಿಯಾಗಿರೋ ಕೀಚಕ ಕೃತ್ಯ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಂತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರೋ ಆರೋಪ ಕೇಳಿ ಬಂದಿದೆ. 7ನೇ ತರಗತಿ ವಿದ್ಯಾರ್ಥಿನಿ ಓದುವ ವಯಸ್ಸಿನಲ್ಲಿ ಈಗ 6 ತಿಂಗಳ ಗರ್ಭಿಣಿಯಾಗಿದ್ದಾಳೆ.

ಸಂಬಂಧಿಕ ಯುವಕನೇ ಬಾಲಕಿ ಮೇಲೆ ಅತ್ಯಾಚಾರ ನಡೆಸಿರೋದಾಗಿ ಆರೋಪಿಸಲಾಗುತ್ತಿದೆ. ಸಾರ್ವಜನಿಕರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿದಂತ ಇಲಾಖೆಯ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿ ಬಾಲ ಮಂದಿರಕ್ಕೆ ಕರೆದೊಯ್ದು ಆರೈಕೆ ಮಾಡುತ್ತಿದ್ದಾರೆ.

ಈ ಕುರಿತಂತೆ ಚಿಕ್ಕಬಳ್ಳಾಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಾನು ‘ಲೋಕಸಭಾ ಚುನಾವಣೆ’ಯಿಂದ ಹಿಂದೆ ಸರಿದಿದ್ದೇನೆ – ಮಾಜಿ ಸಚಿವ ‘MTB ನಾಗರಾಜ್’ ಘೋಷಣೆ

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ‘ಶೌಚಾಲಯ’ಕ್ಕಾಗಿ ಹತ್ತಿರದ ‘ಮಾಲ್’ ಮೊರೆಹೋದ ‘ಪ್ಲಾಟ್ ಮಾಲೀಕರು’ | Bengaluru water crisis

Share.
Exit mobile version