ಬೆಂಗಳೂರು : ಅನುದಾನರಹಿತ ಹಾಗೂ ಅನುದಾನಿತ ಖಾಸಗಿ ಶಾಲೆಗಳ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಅವಕಾಶ ನೀಡಲಾಗಿದೆ.
ಮಾನ್ಯತೆ ಅಥವಾ ನವೀಕರಣಕ್ಕಾಗಿ ಸಲ್ಲಿಸಿದ ಅರ್ಜಿಗಳು ತಿರಸ್ಕೃತವಾಗಿದ್ದರೆ ಅಥವಾ ಇದುವರೆಗೆ ಶಾಲೆಗಳು ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದರೆ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ ಲೈನ್ ಮೂಲಕ ಸೆಪ್ಟೆಂಬರ್ 29 ರಿಂದ ಅ. 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ನಿಗದಿತ ದಿನದೊಳಗೆ ಸುರಕ್ಷತಾ ಪ್ರಮಾಣ ಪತ್ರ ಸಲ್ಲಿಸಲು ಸಾಧ್ಯವಾಗದೇ ಇದ್ದರೆ ಅಂತಹ ಶಾಲೆಗಳು ಸಹ ಅಫಿಡವಿಟ್ ಸಲ್ಲಿಕೆ ಮಾಡಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ನವೆಂಬರ್ 25 ರೊಳಗಾಗಿ ಉಪನಿರ್ದೇಶಕರಿಗೆ ಸಲ್ಲಿಸತಕ್ಕದ್ದು, ಇಲ್ಲವಾದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
GOOD NEWS : ‘ಸುಗ್ರೀವಾಜ್ಞೆ’ ಮೂಲಕ ರಾಜ್ಯದಲ್ಲಿ ‘ಕೃಷಿ ಭೂ ಪರಿವರ್ತನೆ ತಿದ್ದುಪಡಿ ಮಸೂದೆ’ ಜಾರಿಗೆ