ಮಂಗಳೂರು: ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಅಯೋಧ್ಯೆ, ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು, ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವಂತ ಪ್ರಭಾ ಎಂಬುವರು, ಶ್ರೀರಾಮನ ಬಗ್ಗೆ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ವಿಷಯವನ್ನು ಶಾಲಾ ಮಕ್ಕಳು ಪೋಷಕರಿಗೆ ತಿಳಿಸಿದಾಗ, ಶಾಲೆಯ ಬಳಿ ಆಗಮಿಸಿದಂತ ಪೋಷಕರು, ಹಿಂದೂ ಪರ ಕಾರ್ಯಕರ್ತರು ಶಿಕ್ಷಕಿಯ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಇನ್ನೂ ಜೆರೋಸಾ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರ ಹಾಕಿರುವಂತ ಹಿಂದೂ ಕಾರ್ಯಕರ್ತರು, ಶಿಕ್ಷಕಿ ಪ್ರಭಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಪರಿಸ್ಥಿತಿ ನಿಯಂತ್ರಿಸೋದಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ – ಡಿಸಿಎಂ ಡಿ.ಕೆ. ಶಿವಕುಮಾರ್
ಸರ್ಕಾರದ ವಿರುದ್ಧ ಕಮಿಷನ್ ಆರೋಪ ವಿಚಾರ : ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ್ ಆಗ್ರಹ