ಮಂಗಳೂರು:ಶಾಲೆಗಳಲ್ಲಿ ವಿದ್ಯಾರ್ಥಿಗಳು ಕಸ ಗುಡಿಸುವುದು ತಪ್ಪಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಶೌಚಾಲಯಗಳನ್ನು ಸ್ವಚ್ಚಗೊಳಿಸುವುದರಲ್ಲಿ ಕೂಡ ತಪ್ಪಿಲ್ಲ.ಆದರೆ ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ ಎಂದರು.
ಇತ್ತೀಚೆಗೆ ಶಾಲೆಗಳಲ್ಲಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ಸುದ್ದಿಯಾಗಿತ್ತು.ಇದರಿಂದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಆದರೆ ಯುಟಿ ಖಾದರ್ ಇದನ್ನು ಸಮರ್ಥಿಸಿಕೊಂಡಿದ್ದು, ಇಂಥ ಕೆಲಸಗಳನ್ನು ಚಿಕ್ಕಂದಿನಲ್ಲೇ ತಿಳಿದುಕೊಳ್ಳುವುದು ಉತ್ತಮ. ಇದೂ ಸಹ ಶಿಕ್ಷಣದ ಒಂದು ಭಾಗ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಶುಕ್ರವಾರ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ, ಕಸ ಗುಡಿಸುವುದಕ್ಕೆಂದೇ ಪ್ರತ್ಯೇಕ ಸಿಬ್ಬಂದಿ ಇರುವುದಿಲ್ಲ. ವಿದ್ಯಾರ್ಥಿಗಳು ಆ ಕೆಲಸ ಮಾಡುವುದು ಸಹಜ. ಕೈಗವಸು ಹಾಕಿ ಬ್ರಷ್ ಬಳಸಿ ಶೌಚಾಲಯ ಸ್ವಚ್ಛಗೊಳಿಸಿವುದು ತಪ್ಪಲ್ಲ. ಸಣ್ಣವನಿದ್ದಾಗ ನಾನೂ ಆ ಕೆಲಸ ಮಾಡಿದ್ದೆ ಎಂದು ಖಾದರ್ ಹೇಳಿದ್ದಾರೆ.