ಉತ್ತರ ಕನ್ನಡ: ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆಯೂ ಮಳೆಯ ಆರ್ಭಟ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ ಉತ್ತರ ಕನ್ನಡ ಜಿಲ್ಲೆಯ ನಾಲ್ಕು, ಉಡುಪಿ ಜಿಲ್ಲೆಯ 2 ತಾಲ್ಲೂಕಿನ ಶಾಲಾ-ಕಾಲೇಜಿಗಳು ಮುನ್ನೆಚ್ಚರಿಕೆಯ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಆದೇಶ ಹೊರಡಿಸಿದ್ದು, ನಾಳೆ ಕಾರವಾರ, ಕುಮಟಾ, ಭಟ್ಕಳ ಹಾಗೂ ಹೊನ್ನಾವರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಮಳೆಯ ಕಾರಣ ರಜೆ ನೀಡಲಾಗಿದೆ ಅಂತ ತಿಳಿಸಿದ್ದಾರೆ.

ಇನ್ನೂ ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯ ಕಾರಣ ನಾಳೆ ಕುಂದಾಪುರ ಹಾಗೂ ಬ್ರಹ್ಮಾವರ ತಾಲ್ಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ.

ಆದರೇ ಈ ಎರಡು ತಾಲ್ಲೂಕಿನ 1 ರಿಂದ 10 ಹಾಗೂ ಪಿಯುಸಿವರೆಗೆ ರಜೆ ಮಾತ್ರ ನೀಡಲಾಗಿದ್ದು, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮೊದಲಾದ ಕಾಲೇಜುಗಳಿಗೆ ರಜೆ ನೀಡಿಲ್ಲ ಅಂತ ಕುಂದಾಪುರ ಉಪ ವಿಭಾಗೀಯ ಸಹಾಯಕ ಆಯುಕ್ತೆ ರಶ್ಮಿ ಆದೇಶದಲ್ಲಿ ತಿಳಿಸಿದ್ದಾರೆ.

BREAKING: ಬ್ರಿಟನ್ ನೂತನ ಪ್ರಧಾನಿಯಾಗಿ ‘ಕೈರ್ ಸ್ಟಾರ್ಮರ್’ ನೇಮಕ | Keir Starmer Appointed UK PM

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

Share.
Exit mobile version