ಶಿವಮೊಗ್ಗ: ಇಂದು ಭಾರೀ ಮಳೆಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಡಿಸಿ ಆದೇಶಿಸಿದ್ದರು. ನಾಳೆ ಕೂಡ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಕಾರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಸಂಬಂಧ ತೀರ್ಥಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಅವರು ಆದೇಶ ಹೊರಡಿಸಿದ್ದು, ತಾಲ್ಲೂಕಿನಲ್ಲಿ ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜುಲೈ.18ರ ನಾಳೆಯಂದು ತೀರ್ಥಹಳ್ಳಿ ತಾಲ್ಲೂಕಿನ ಶಆಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಹೊಸನಗರ ತಾಲ್ಲೂಕಿನಲ್ಲಿಯೂ ನಾಳೆ ಮಳೆ ಮುಂದುವರೆಯು ಕಾರಣ, ತಹಶೀಲ್ದಾರ್ ರಶ್ಮೀ ಹಾಲೇಶ್ ಅವರು, ಜುಲೈ.18ರ ನಾಳೆಯಂದು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿದ್ದಾರೆ.
ಒಟ್ಟಾರೆಯಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಹೊಸನಗರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಭಾರೀ ಮಳೆಯಾಗುವ ಮುನ್ಸೂಚನೆಯ ಕಾರಣ ನಾಳೆ ರಜೆಯನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದ ತಾಲ್ಲೂಕಿನ ಶಾಲೆಗಳಿಗೆ ರಜೆಯ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
ವಯಸ್ಸಾದ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ವಿರುದ್ಧ MRNA-HPV ಲಸಿಕೆ ಬಳಸಲು ಸರ್ಕಾರ ಪರಿಗಣನೆ ?
BIG NEWS : 2026 ನೇ ಸಾಲಿನಿಂದ ವರ್ಷಕ್ಕೆ ಎರಡು ಬಾರಿ ʻCBSEʼ ಬೋರ್ಡ್ ಪರೀಕ್ಷೆ ಜಾರಿ : ʻNCFSEʼ ಶಿಫಾರಸು
BIG NEWS: ‘ಏರೋಸ್ಪೇಸ್ ಕ್ಷೇತ್ರ’ದಲ್ಲಿ 60,000 ಕೋಟಿ ಹೂಡಿಕೆ, 70,000 ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ