ಶಿವಮೊಗ್ಗ: ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣವಿದೆ. ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಾಳೆ ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ( School and College Holiday ) ಘೋಷಣೆ ಮಾಡಲಾಗಿದೆ.
BIG BREAKING NEWS: ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ
ಈ ಕುರಿತಂತೆ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ 16/08/2022 ರಂದು ರಜೆ ಘೋಷಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.
ಅಂದಹಾಗೇ ಇಂದು ಸ್ವಾತಂತ್ರ್ಯೋತ್ಸವ ಸಲುವಾಗಿ ಅಮೀರ್ ಅಹ್ಮದ್ ವೃತ್ತದಲ್ಲಿ ಹಾಕಲಾಗಿದ್ದಂತ ವಿ.ಡಿ ಸಾವರ್ಕರ್ ಫ್ಲೆಕ್ಸ್ ಅನ್ನು ಒಂದು ಕೋಮಿನ ಯುವಕರ ಗುಂಪು ತೆಗೆದು ಹಾಕಿತ್ತು. ಈ ವೇಳೆ ಪೊಲೀಸರು ಹಾಗೂ ಯುವಕರ ನಡುವೆ ಮಾತಿನ ಚಕಮಕಿ ಕೂಡ ನಡೆದಿತ್ತು. ಆಗ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದರು.
BIG BREAKING NEWS: ಶಿವಮೊಗ್ಗದಲ್ಲಿ ಭುಗಿಲೆದ್ದ ಸಾವರ್ಕರ್ ಪೋಸ್ಟರ್ ಗಲಾಟೆ: ಇಬ್ಬರಿಗೆ ಚಾಕು ಇರಿತ
ಈ ಬಳಿಕ ನಗರದ ಉಪ್ಪಾರಕೇರಿ ಹಾಗೂ ಅಶೋಕ ನಗರದಲ್ಲಿ ದುಷ್ಕರ್ಮಿಗಳು ಇಬ್ಬರಿಗೆ ಚಾಕುವಿನಿಂದ ಇರಿದಿದ್ದರು. ಹೀಗಾಗಿ ನಗರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು. ಈ ಕಾರಣದಿಂದಾಗಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು, ನಾಳೆ ಮತ್ತು ನಾಡಿದ್ದು ಮೂರು ದಿನ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.