ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ಅವಾಂತರವೇ ಸೃಷ್ಠಿಯಾಗಿದೆ. ಮನೆಯಿಂದ ಹೊರ ಬರಲು ಸಾಧ್ಯವಾಗದಂತ ಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ.
ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.
ಅಂದಹಾಗೆ ಬೆಂಗಳೂರಲ್ಲಿ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಇದರ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆದರೇ ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಸಂಸದ ಇ.ತುಕಾರಾಂ ಅನರ್ಹತೆಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ: ಬಿ.ವೈ.ವಿಜಯೇಂದ್ರ
‘ಸಚಿವ ರಾಮಲಿಂಗಾರೆಡ್ಡಿ’ ಕಾರ್ಯವೈಖರಿಯನ್ನು ಹಾಡಿ ಹೊಗಳಿದ ‘ಅರ್ಚಕರ ಸಮೂಹ’