Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ
KARNATAKA

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳಾಗಿವೆ ಎಂದು ಸಾಗರ ತಾಲ್ಲೂಕು ಅಕ್ಷರ ದಾಸೋಹ ವಿಭಾಗದ ಸಹಾಯಕ ನಿರ್ದೇಶಕರಾದ ಭೂಮೇಶ್ ಅವರು ಅಭಿಪ್ರಾಯಪಟ್ಟರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಯಡಜಿಗಳೇಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ಅತ್ಯುತ್ತಮ ವಾತಾವರಣವನ್ನು ನಿರ್ಮಾಣ ಮಾಡಲಾಗಿದೆ. ಸರ್ಕಾರದಿಂದ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಶೂ ಹಾಗೂ ಸಾಕ್ಸ್‌ಗಳನ್ನು ನೀಡಲಾಗುತ್ತಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಈ ಎಲ್ಲಾ ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಂಡು, ಉತ್ತಮವಾಗಿ ಕಲಿಯುವ ಮೂಲಕ ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ಕರೆ ನೀಡಿದರು.

ಸರ್ಕಾರಿ ಶಾಲೆಗಳ ಸೌಲಭ್ಯ ಬಳಸಿ: ವಿ.ಟಿ.ಸ್ವಾಮಿ

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿಕ್ಷಣ ಸಂಯೋಜಕರಾದ ವಿ.ಟಿ.ಸ್ವಾಮಿ ಮಾತನಾಡಿ, “ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಈ ಹಂತದಲ್ಲೇ ಶಿಕ್ಷಣದ ಬಗ್ಗೆ ಮಕ್ಕಳಲ್ಲಿ ವಿಶೇಷ ಆಸಕ್ತಿ ಮತ್ತು ಜಿಜ್ಞಾಸೆಯನ್ನು ಬೆಳೆಸುವುದು ಮುಖ್ಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗೆ ಸರಿಸಮನಾದ ಸೌಲಭ್ಯಗಳಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ,” ಎಂದರು.

ಸಂಭ್ರಮದ ಸ್ವಾಗತ ಮತ್ತು ಪುಸ್ತಕ ವಿತರಣೆ

ಹೊಸ ಶೈಕ್ಷಣಿಕ ವರ್ಷದ ಮೊದಲ ದಿನದ ಅಂಗವಾಗಿ ಶಾಲೆಗೆ ಆಗಮಿಸಿದ ಪುಟ್ಟ ಕಂದಮ್ಮಗಳಿಗೆ ಹೂವುಗಳನ್ನು ನೀಡಿ, ಪ್ರೀತಿಯಿಂದ ಬರಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹೊಸ ಸಾಲಿನ ಉಚಿತ ಪಠ್ಯಪುಸ್ತಕಗಳನ್ನು ಗಣ್ಯರ ಸಮ್ಮುಖದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರಾದ ಲೋಕೇಶ್ ವಹಿಸಿದ್ದರು. ವೇದಿಕೆಯಲ್ಲಿ ಬ್ಲಾಕ್ ಸಂಪನ್ಮೂಲ ವ್ಯಕ್ತಿ (BRP) ಮಹೇಶ್ ಕುಮಾರ್, ಪ್ರಮುಖರಾದ ವಿದ್ಯಾ ಸುರೇಶ್, ಪ್ರಶಾಂತ್, ಹೆಚ್.ಕೆ. ಪರಮಾತ್ಮ, ಶಾಲೆಯ ಮುಖ್ಯ ಶಿಕ್ಷಕರಾದ ಸತ್ಯಪ್ಪ ಹಾಗೂ ಸಹ ಶಿಕ್ಷಕರಾದ ಗೌರಮ್ಮ, ಶೃತಿ, ಸಂತೋಷ್ ಸೇರಿದಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

Share. Facebook Twitter LinkedIn WhatsApp Email

Related Posts

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

2 Mins Read

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

2 Mins Read

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

2 Mins Read
Recent News

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

State News
KARNATAKA

ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳು: ಸಾಗರ ಅಕ್ಷರ ದಾಸೋಹ AD ಭೂಮೇಶ್ ಆಶಯ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳಾಗಿವೆ ಎಂದು ಸಾಗರ ತಾಲ್ಲೂಕು ಅಕ್ಷರ ದಾಸೋಹ ವಿಭಾಗದ ಸಹಾಯಕ…

ವಿಶ್ವ ಹಾಲು ದಿನ: ಮಂಡ್ಯದ ಮದ್ಧೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಉತ್ಪನ್ನಗಳ ವಿತರಣೆ

ಸಮಾಜ ಮುಖಿ ಕಾರ್ಯಗಳ ಮೂಲಕ ಮದ್ದೂರು ಶಾಸಕ ಕೆ.ಎಂ.ಉದಯ್ ಜನ್ಮ ದಿನ ಆಚರಣೆ

ಮಂಡ್ಯದ ಮದ್ದೂರಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.