ಮಂಗಳೂರು: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಆದೇಶ ಹೊರಡಿಸಿದ್ದು, ನಾಳೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ.
ನಾಳೆ ಹವಾಮಾನ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಅನ್ನು ನೀಡಲಾಗಿದೆ. ಈಗಾಗಲೇ ಭಾನುವಾರ ರಾತ್ರಿಯಿಂದಲೇ ಮಳೆಯಾಗುತ್ತಿದ್ದು, ನಾಳೆ ಇನ್ನೂ ಹೆಚ್ಚಾಗುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿರುವುದಾಗಿ ಹೇಳಿದ್ದಾರೆ.
BIG NEWS: ‘ವಿಧಾನಪರಿಷತ್ತಿ’ನಲ್ಲಿ ಪ್ರತಿಧ್ವನಿಸಿದ ‘ನಿತ್ಯ ಸುಮಂಗಲಿ’ ಪದ: ‘ಮಹಿಳಾ ಸದಸ್ಯ’ರು ಆಕ್ಷೇಪ
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ