ಉಡುಪಿ : ರಾಜ್ಯದಲ್ಲಿ ವರುಣನ ಅಬ್ಬರದಿಂದ ಅನೇಕ ಕಡೆಗೆ ಅವಾಂತರ ಸೃಷ್ಟಿಯಾಗಿದ್ದು, ಉತ್ತರ ಕನ್ನಡದಲ್ಲಿ ಮಳೆಗೆ ಗುಡ್ಡ ಕುಸಿದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್​​​ ಆಗಿತ್ತು. ಇತ್ತ ಉಡುಪಿಯಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ 45 ವರ್ಷದ ಮಹಿಳೆಯೊಬ್ಬರು ಉಸುರುಗಟ್ಟಿ ಸಾವನ್ನಪ್ಪಿದ್ದರು. ಹೀಗಾಗಿ ಎರಡು ಜಿಲ್ಲೆಗಳ ಜಿಲ್ಲಾ ಆಡಳಿತವು ಹಲವು ಆಯ್ದ ತಾಲೂಕುಗಳಿಗೆ ರಜೆ ಘೋಷಿಸಿದೆ.

ಉಡುಪಿಯ 3 ತಾಲೂಕಿಗಳಲ್ಲಿ ರಜೆ ಘೋಷಣೆ

ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ. ಆದರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಳೆ ಕುಮಟಾ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ

ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಕುಮಟಾ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ. ಅಗತ್ಯಬಿದ್ದಲ್ಲಿ ಹೊನ್ನಾವರ ತಾಲೂಕಿನ ಶಾಲೆಗಳಿಗೂ ರಜೆ ನೀಡಲು ಸೂಚನೆ ನೀಡಿದ್ದಾರೆ. ನಾಳೆ ಮಳೆಯಿಂದ ಇನ್ನಷ್ಟು ಅವಾಂತರ ಆಗುವ ಸಾಧ್ಯತೆಯಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಮಹಿಳೆ ಸಾವು

ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಮಹಿಳೆ ಒಬ್ಬರು ಸಾವನ್ನಪ್ಪಿದ್ದರೆ. ಕಾಲು ಜಾರಿ ಹಳ್ಳಕ್ಕೆ ಬಿದ್ದು 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಕಾಲು ಸಂಕದ ಮೇಲೆ ಹೋಗುವಾಗ ಮಹಿಳೆ ಜಾರಿಬಿದ್ದು ಕಾಲೇಜ್ ಹೇಳಕ್ಕೆ ಬಿದ್ದು 43 ವರ್ಷದ ಶಶಿಕಲಾ ಎನ್ನುವ ಮಹಿಳೆ ಸಾವನ್ನಪ್ಪಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ ಉಡುಪಿಯಲ್ಲಿ ಮಣ್ಣು ಕೋಶದಿಂದ 55 ವರ್ಷದ ಮಹಿಳೆಯೊಬ್ಬರು ಕೂಡ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.

Share.
Exit mobile version