ಧಾರವಾಡ : ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು ಗಾಳಿ ಬೀಸುತ್ತಿರುವುದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿಯ ಈ ತಾಲೂಕುಗಳಲ್ಲಿ ರಜೆ ಘೋಷಣೆ
ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು ಇದೀಗ ಬೆಳಗಾವಿಯ ಖಾನಾಪುರ ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ಮತ್ತು ನಾಳೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೈಲಹೊಂಗಲ, ಕಿತ್ತೂರು ತಾಲೂಕಿನ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದ್ದು, ಅದೆ ರೀತಿ ಬೆಳಗಾವಿ ಖಾನಾಪುರ ತಾಲೂಕು, ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೂ ಕೂಡ ರಜೆ ಘೋಷಿಸಲಾಗಿದೆ ಇಂದು, ನಾಳೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.