ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ( Heavy Rain ), ಶಾಲೆಗಳಲ್ಲಿ ( School ) ಕೆಲ ಮುಂಜಾಗ್ರತಾ ಕ್ರಮಗಳನ್ನು ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ( Education Department ) ಆದೇಶಿಸಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ( School Education Department ) ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಶಾಲಾ ಮುಖ್ಯಸ್ಥರಿಗೆ ಪತ್ರವನ್ನು ಬರೆದಿದ್ದಾರೆ.
ದಿನಾಂಕ 29-05-2023ರಿಂದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಲಿವೆ. ಈ ಸಂದರ್ಭದಲ್ಲಿಯೇ ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಮಳೆಯಾಗುತ್ತಿದೆ. ಶಾಲೆಗಳನ್ನು ಪ್ರಾರಂಭಿಸಿ ನಡೆಸವು ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕೆಲ ಮುಂಜಾಗ್ರತಾ ಕ್ರಮಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ, ಸಿಬ್ಬಂದಿಗಳು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಹೀಗಿವೆ ಶಾಲೆಗಳಲ್ಲಿ ಕೈಗೊಳ್ಳಬೇಕಾದಂತ ಮುಂಜಾಗ್ರತಾ ಕ್ರಮಗಳು
- ತೀವ್ರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿರುವ ಕೆಲವು ಶಾಲಾ ಕಟ್ಟಡಗಳು ಯಾವುದೇ ಸಂದರ್ಭದಲ್ಲಿ ಹಾನಿಗೊಳಗಾಗುವ, ಬಿದ್ದು ಹೋಗುವ ಸಂಭವವಿರುತ್ತದೆ. ಹೀಗಾಗಿ ಅಂತಹ ಶಾಲಾ ಕಟ್ಟಡಗಳನ್ನು, ತರಗತಿಯ ಕೊಠಡಿ, ಶೌಚಾಲಯಗಳನ್ನು ಬಳಸದೆ, ಸಮೀಪದ ಸುಸ್ಥಿತಿಯಲ್ಲಿರುವ ಕಟ್ಟಡ, ಕೊಠಡಿಗಳನ್ನು, ಶೌಚಾಲಯಗಳ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
- ಶಿಥಿಲಾವಸ್ಥೆಯಲ್ಲಿರುವ ಕೊಠಡಿ, ಕಟ್ಟಡ, ಶೌಚಾಲಯಗಳ ಸಮೀಪದಲ್ಲಿ ಮಕ್ಕಳು ಸೇರಿದಂತೆ ಯಾರು ಸುತ್ತಾಡದಂತೆ ಎಚ್ಚರಿಕೆಯ ಕ್ರಮ ವಹಿಸುವಂತೆ ತಿಳಿಸಿದ್ದಾರೆ.
- ಕೆಲವೆಡೆ ತೀವ್ರ ಮಳೆಯಿಂದಾಗಿ ಪ್ರವಾಹ, ನೆರೆ ಬಂದು ವಿದ್ಯಾರ್ಥಿಗಳು ಶಾಲೆಗಳಿಗೆ ಬಂದು ಹೋಗಲು ತೊಂದರೆಯುಂಟಾಗುವ, ಕೆಲವು ಸಂದರ್ಭಗಳಲ್ಲಿ ಮಳೆಯಿಂದಾಗಿ ಶಾಲೆಗಳ ಕೊಠಡಿಗಳಲ್ಲಿ, ಆವರಣದೊಳಗೆ ನೀರು ಸಂಗ್ರಹವಾಗುವ ಸಂಭವವಿರುತ್ತದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯ್ತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳ ಸಹಕಾರದಿಂದ ಶಾಲಾ ಕಟ್ಟದಲ್ಲಿ ಸಂಗ್ರವಾಗಿರುವ ನೀರನ್ನು ತೆರವುಗೊಳಿಸುವ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
- ಇನ್ನೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಜಿಲ್ಲಾ ಉಪನಿರ್ದೇಶಕರ ಪೂರ್ವಾನುಮತಿ ಪಡೆದು, ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆಯೂ ತಿಳಿಸಿದ್ದಾರೆ. ರಜಾ ದಿನಗಳಲ್ಲಿನ ಪಾಠ, ಪ್ರವಚನಗಳನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ
BREAKING NEWS : `ಜೆಡಿಎಸ್ ಯುವ ಘಟಕದ ಅಧ್ಯಕ್ಷ’ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಉದ್ಯೋಗ ವಾರ್ತೆ: ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ