ಗದಗ : SCP-TSP ಹಣವನ್ನು ಗ್ಯಾರೆಂಟಿ ಯೋಜನೆಗೆ ಡೈವರ್ಟ್ ಮಾಡಿದ್ದಾರೆ.ಕಳೆದ ವರ್ಷ 11,000 ಕೋಟಿ, ಈ ವರ್ಷ 13000 ಕೋಟಿ ಡೈವರ್ಟ್ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ನೀಡಿದ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಗದಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗಂಭೀರವಾಗಿ ಆರೋಪಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರವಿದೆ ಗದಗದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಹೇಳಿಕೆ ನೀಡಿದ್ದು ಇಡೀ ಸಚಿವ ಸಂಪುಟವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಸಚಿವರ ರಾಜೀನಾಮೆ ಕೇಳುವ ನೈತಿಕತೆಯನ್ನೇ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ನವರು ಎಸ್ಸಿ ಎಸ್ಟಿ ಉದ್ದಾರ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಾರೆ. ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರದಲ್ಲೂ ಕಾಂಗ್ರೆಸ್ ಕ್ರಮ ಕೈಗೊಂಡಿಲ್ಲ.ನಾನು ಮುಖ್ಯಮಂತ್ರಿ ಆಗಿದ್ದಾಗ ಎಸ್ಸಿ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದೆ. ಆದರೆ ಈಗ ಸಿಎಂ ಸಿದ್ದರಾಮಯ್ಯ SCP-TSP ಹಣವನ್ನು ಗ್ಯಾರೆಂಟಿ ಯೋಜನೆಗೆ ಡೈವರ್ಟ್ ಮಾಡಿದ್ದಾರೆ ಎಂದು ಆರೋಪಿಸಿದರು.