ಬೆಂಗಳೂರು: ವಕೀಲ ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಆಡಿಯೋವೊಂದನ್ನು ಶೇರ್ ಮಾಡಿ ಗುಡುಗಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ದೇವರಾಜೇಗೌಡ ಏಕಾಏಕಿ ಪತ್ರಿಕಾಗೋಷ್ಠಿ ನಡೆಸಿ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರನ್ನು ಎಳೆದು ತಂದಾಗಲೇ ಇಲ್ಲೇನೋ ಮಸಲತ್ತಿದೆ ಎಂಬ ಗುಮಾನಿ ದಟ್ಟವಾಗಿತ್ತು. ಆದರೆ ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ ಎಂದು ಹೇಳಿದೆ.
ಒಂದೇ ಏಟಿನಲ್ಲಿ ಜೆಡಿಎಸ್ ಪಕ್ಷವನ್ನು ಮುಳುಗಿಸುವುದರ ಜೊತೆಗೆ ಕಾಂಗ್ರೆಸ್ ನಾಯಕರನ್ನೂ ಟಾರ್ಗೆಟ್ ಮಾಡುವ ಮಹಾ ಕುತಂತ್ರ ಅಮಿತ್ ಶಾ ಅವರದ್ದು, ಆದರೆ ಕಾಂಗ್ರೆಸ್ ನಾಯಕರ ಕೂದಲು ಕೊಂಕಿಸಲು ಅಸಾಧ್ಯದ ಮಾತು ಎಂಬುದನ್ನು ಅರ್ಥ ಮಾಡಿಕೊಂಡರೆ ಒಳಿತು ಎಂದಿದೆ.
ಈ ಪೆನ್ ಡ್ರೈವ್ ಪ್ರಕರಣದ ಹಿಂದೆ ಬಿಜೆಪಿ ಹಾಗೂ ಬ್ರದರ್ ಸ್ವಾಮಿಯ ಬಹುದೊಡ್ಡ ಷಡ್ಯಂತ್ರ ಅಡಗಿದೆ. ಬಿಜೆಪಿ ಎಂಬ ಅನೈತಿಕ ರಾಜಕೀಯ ಪಕ್ಷಕ್ಕೆ ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದಿರುವುದು ರಾಜಕೀಯ ಕ್ಷೇತ್ರಕ್ಕೆ ಕಳಂಕದಂತಾಗಿದೆ ಎಂದು ಕಿಡಿಕಾರಿದೆ.
ದೇವರಾಜೇಗೌಡ ಏಕಾಏಕಿ ಪತ್ರಿಕಾಗೋಷ್ಠಿ ನಡೆಸಿ ಪೆನ್ ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರನ್ನು ಎಳೆದು ತಂದಾಗಲೇ ಇಲ್ಲೇನೋ ಮಸಲತ್ತಿದೆ ಎಂಬ ಗುಮಾನಿ ದಟ್ಟವಾಗಿತ್ತು.
ಆದರೆ ದೇವರಾಜೇಗೌಡನ ಮಾತುಗಳ ಸ್ಕ್ರೀಪ್, ಡೈರೆಕ್ಷನ್ ಎಲ್ಲವೂ ಬಿಜೆಪಿ ಹೈಕಮಾಂಡಿನದ್ದು ಎಂದು ಬಹಿರಂಗವಾಗಿದೆ.
ಒಂದೇ ಏಟಿನಲ್ಲಿ ಜೆಡಿಎಸ್ ಪಕ್ಷವನ್ನು… pic.twitter.com/XCXJ1xhFCx
— Karnataka Congress (@INCKarnataka) May 10, 2024
Karnataka Rain: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
BREAKING: ಪ್ರಜ್ವಲ್ ಅಶ್ಲೀಲ ವೀಡಿಯೋ ಕೇಸ್: ವಕೀಲ ದೇವರಾಜೇಗೌಡ ಆಜ್ಞಾತ ಸ್ಥಳದಿಂದ ‘3 ಆಡಿಯೋ ಕ್ಲಿಪ್’ ಬಿಡುಗಡೆ