ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಎಂಬುದಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಈ ಸಂಬಂಧ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರಲ್ಲಿ 2ನೇ ಏರ್ಪೋರ್ಟ್ ನಿರ್ಮಾಣ ಸಂಬಂಧ ಇಂದು ಮಹತ್ವದ ಚರ್ಚೆಯನ್ನು ಸಭೆಯಲ್ಲಿ ನಡೆಸಲಾಯಿತು. ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.
ಇಂದಿನ ಸಭೆಯಲ್ಲಿ ಬೆಂಗಳೂರಿನ 7 ಸ್ಥಳಗಳಲ್ಲಿ 2ನೇ ವಿಮಾನ ನಿರ್ಮಾಣದಿಂದ ಆಗುವಂತ ಸಾಧಕ-ಬಾಧಕಗಳ ಕುರಿತಂತೆ ಚರ್ಚೆ ನಡೆಸಲಾಯಿತು. ತಜ್ಞರು ನೀಡಿದಂತ ಸಲಹೆಯನ್ನು ಪಡೆಯಲಾಗಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ 2ನೇ ವಿಮಾನವಾಗಿ ಹೊಸ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚಿಸಿ, ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ. ಈಗ ಬೆಂಗಳೂರಿನಲ್ಲಿ ನಿರ್ಮಾಣವಿರುವಂತ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಾಕಾಗುವುದಿಲ್ಲ. ಹೀಗಾಗಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಚರ್ಚಿಸಲಾಗಿದೆ ಎಂದರು.
BREAKING: ದೆಹಲಿಗೆ ಬಂದಿಳಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ: IAF ಹಿರಿಯ ಅಧಿಕಾರಿಗಳಿಂದ ಸ್ವಾಗತ
ಬ್ರಿಟಿಷರಿಂದಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ, ನಿಮ್ಮಿಂದ ಆಗುತ್ತಾ?: ಡಿಕೆ ಶಿವಕುಮಾರ್ ಗುಡುಗು