ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರಾದರೆ, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿ ಎಂದು ಹಾರೈಸುತ್ತೇನೆ. #2ndPUCexam— Siddaramaiah (@siddaramaiah) February 28, 2026








