ಕಲಬುರ್ಗಿ: ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲೀಷ್ ಪತ್ರಿಕೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಡಿಡಿಪಿಐ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದ್ವಿತೀಯ ಪಿಯುಸಿ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಕಲಬುರ್ಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿಡಿಪಿಐ ಸುರೇಶ್ ಅಕ್ಕಣ್ಣ ನೀಡಿದಂತ ದೂರಿನನ್ವಯ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಂದಹಾಗೆ ಜನವರಿ.8ರಂದು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯ ಹಿಂದಿನ ದಿನ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು.
BJP ಅನುದಾನದ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿ ಚಿಲ್ಲರೆ ರಾಜಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ








