ಚಿತ್ರದುರ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಜಿಲ್ಲೆಯ ಹೊಸದುರ್ಗ ಮತ್ತು ಚಿತ್ರದುರ್ಗ ನಗರದ ವಿದ್ಯಾರ್ಥಿಗಳು ಭರ್ಜರಿ ಅಂಕ ಗಳಿಸಿ ಸಾಧನೆಯ ಶಿಖರವೇರಿದ್ದಾರೆ.
ಹೊಸದುರ್ಗದ ವಿಲಾಸ್ ಆರ್. ಯಾದವ್ ಸಾಧನೆ
ಹೊಸದುರ್ಗ ಪಟ್ಟಣದ ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾದ ವಿಲಾಸ್ ಆರ್. ಯಾದವ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 583 ಅಂಕಗಳನ್ನು ಗಳಿಸುವ ಮೂಲಕ ಅದ್ಭುತ ಸಾಧನೆ ಮಾಡಿದ್ದಾರೆ.
-
ವಿಲಾಸ್ ಅವರು ರಾಜು ಮತ್ತು ಮೀನಾಕ್ಷಿ ದಂಪತಿಯ ಪುತ್ರರಾಗಿದ್ದು, ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಎಕ್ಸ್‌ಪರ್ಟ್ ಕಾಲೇಜಿನ ಪ್ರಜ್ವಲ್ ಸಿ.ಎನ್. ಸಾಧನೆ
ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಎಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಸಿ.ಎನ್. ವಿಜ್ಞಾನ ವಿಭಾಗದಲ್ಲಿ 600ಕ್ಕೆ 574 ಅಂಕಗಳನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
-
ಇವರು ಹಿರಿಯೂರು ನಗರದ ಸಾಯಿ ಲೇಔಟ್ ನಿವಾಸಿಗಳಾದ ನಾಗರಾಜ್ ಮತ್ತು ಚೇತನಾ ದಂಪತಿಯ ಪುತ್ರ. ಗ್ರಾಮೀಣ ಭಾಗದಿಂದ ಬಂದ ಇವರ ಈ ಸಾಧನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಜಿಲ್ಲೆಯಾದ್ಯಂತ ಈ ಇಬ್ಬರೂ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಕಠಿಣ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನವೇ ಈ ಯಶಸ್ಸಿಗೆ ಕಾರಣ ಎಂದು ವಿದ್ಯಾರ್ಥಿಗಳು ಸಂತಸ ಹಂಚಿಕೊಂಡಿದ್ದಾರೆ.
ಕಣ್ಣೀರು ಒರೆಸಿಕೊಳ್ಳುತ್ತಲೇ ‘ದ್ವಿತೀಯ PUC ಪರೀಕ್ಷೆ’ ಬರೆದಳು, ಇಂದು ಇಡೀ ‘ರಾಜ್ಯಕ್ಕೇ ಟಾಪರ್’ ಆದಳು!
BREAKING : ದ್ವಿತೀಯ ಪಿಯು ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ : 3 ವಿಭಾಗದಲ್ಲೂ ಇವರೇ ನೋಡಿ ಟಾಪರ್!








