ಪಂಜಾಬ್ : ಸ್ವಯಂ ಘೋಷಿತ ಸಿಖ್ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದು, ರಾಜ್ಯದಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದೆ ಬೆನ್ನಲ್ಲೆ ಪಂಜಾಬಿನ ಹಲವು ಜಿಲ್ಲೆಗಳಲ್ಲಿ ಸೆಕ್ಷನ್ 144 ಹೇರಲಾಗಿದೆ.ಖಲಿಸ್ತಾನ್ ಬೆಂಬಲಿಗ ಅಮೃತಪಾಲ್ ಸಿಂಗ್ ಅವರ ಗ್ರಾಮ ಜಲ್ಲುಪುರ್ ಖೇಡಾವನ್ನು ಪೊಲೀಸರು ಸೀಲ್ ಮಾಡಿದ್ದಾರೆ.
ಪಂಜಾಬ್ ಪೊಲೀಸರು ಕೂಡ ರಾಜ್ಯದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಇದರ ಜೊತೆಗೆ ಪಂಜಾಬ್-ಹರಿಯಾಣ ಗಡಿಯಲ್ಲಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅಮೃತಪಾಲ್ ಸಿಂಗ್ ನನ್ನು ಬಂಧಿಸಲು ಪಂಜಾಬ್ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಖಲಿಸ್ತಾನಿ ನಾಯಕ ಮತ್ತು ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರನ್ನು ಜಲಂಧರ್‌ನ ನಕೋದರ್ ಬಳಿ ಬಂಧಿಸಲಾಗಿದೆ. ಪಂಜಾಬ್ ಪೊಲೀಸರು ಇದುವರೆಗೆ ಸಿಂಗ್ ಅನ್ನು ಬಂಧಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಲ್ಲ ಎಂದು ಇಂಡಿಯಾ ಟುಡೇಗೆ ವರದಿ ಮಾಡಿದೆ.
‘ಮೋದಿ’ಯಂತಹ ಪ್ರಧಾನಿಯನ್ನು ಪಾಕಿಸ್ತಾನವೂ ಬಯಸುತ್ತದೆ ; ರಾಜನಾಥ್ ಸಿಂಗ್
BREAKING NEWS : ಬೆಳಗಾವಿಯಲ್ಲಿ ಭೀಕರ ಅಪಘಾತ : ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ
BREAKING NEWS: ಶಿವಮೊಗ್ಗ-ಯಶವಂತಪುರ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ: ಹಲವರಿಗೆ ಗಾಯ