ಬೆಂಗಳೂರು: ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಚುನಾವಣಾ ಮತದಾನಕ್ಕೂ ಮುನ್ನ ಇಂದೀಗ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.
ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.
ಇಂದು ಸಂಜೆ 6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ಐದು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ ಹಾಗೂ 40 ಸಿಎಆರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
BIG NEWS: ‘ಮದ್ಯಪ್ರಿಯ’ರೇ ಗಮನಿಸಿ: ಇಂದಿನಿಂದ 2 ದಿನ ಈ ಜಿಲ್ಲೆಗಳಲ್ಲಿ ‘ಎಣ್ಣೆ ಸಿಗಲ್ಲ’
‘ನಾನು ಆ ರೀತಿ ಹೇಳಿಲ್ಲ’ : ಸಂಪತ್ತಿನ ಮರುಹಂಚಿಕೆ ವಿವಾದದ ಕುರಿತು ‘ರಾಹುಲ್ ಗಾಂಧಿ’ ಸ್ಪಷ್ಟನೆ