ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಿನ್ನೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಇದರಿಂದಾಗಿ ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಹುಲಿಹೈದರ್ ಗ್ರಾಮದಲ್ಲಿ ಅಗಸ್ಟ್ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
BREAKING NEWS: ಊಟ ನೀಡುವ ವಿಚಾರಕ್ಕೆ ದಂಪತಿಗಳ ನಡುವೆ ಜಗಳ; ಬಾಮೈದನಿಂದಲೇ ಭಾವನ ಹತ್ಯೆ
ಘಟನೆ ಹಿನ್ನೆಲೆ..?
ಗುರುವಾರದಂದು ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರವಾಗಿತ್ತು. ಸದ್ಯ ಅವರು ಆಸ್ಪತ್ರೆಯಲ್ಲಿ ಸಾವು- ಬದುಕಿನ ಹೋರಾಟ ನಡೆಸುತ್ತಿದ್ದಾರೆ.
ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಗಲಾಟೆ ನಡೆದಿದೆ. ಮುಸ್ಲಿಂ ಸಮುದಾಯದವರೇ ಚಾಕು ಹಿಡಿದುಕೊಂಡು ಬಂದು ಹಲ್ಲೆ ಮಾಡಿದ್ದಾರೆ. ಅಲ್ಲದೇ ಈ ಗಲಾಟೆ ಹಿಂದೆ ಮಾಜಿ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್ ಕಾರಣ ಎಂಬ ಆರೋಪವು ಕೇಳಿ ಬಂದಿತ್ತು.