ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ನಲ್ಪುರ್ ಬಳಿ ಶನಿವಾರ ಪ್ಯಾಸೆಂಜರ್ ರೈಲಿನ ಕನಿಷ್ಠ 4 ಬೋಗಿಗಳು ಹಳಿ ತಪ್ಪಿದ ಪರಿಣಾಮ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಳಿಗ್ಗೆ ರೈಲು ನಲ್ಪುರ್ ನಿಲ್ದಾಣವನ್ನು ತಲುಪುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಸಿಕಂದರಾಬಾದ್-ಶಾಲಿಮಾರ್ ಸೂಪರ್ಫಾಸ್ಟ್ ವೀಕ್ಲಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿವೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ನಿಖರವಾದ ಸಂಖ್ಯೆಯನ್ನು ಇನ್ನೂ ಕಂಡುಹಿಡಿಯಲಾಗಿಲ್ಲ.
22850 ಸಿಕಂದರಾಬಾದ್-ಶಾಲಿಮಾರ್ ಎಕ್ಸ್ಪ್ರೆಸ್ ಸಾಪ್ತಾಹಿಕ ವಿಶೇಷ ರೈಲು. ಆಗ್ನೇಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಓಂಪ್ರಕಾಶ್ ಚರಣ್ ಅವರು ದೂರವಾಣಿ ಮೂಲಕ ನೀಡಿದ ಮಾಹಿತಿಯ ಪ್ರಕಾರ, ಸಿಕಂದರಾಬಾದ್ನಿಂದ ಶಾಲಿಮಾರ್ಗೆ ಬರುತ್ತಿದ್ದ ರೈಲು ನಲ್ಪುರ್ ನಿಲ್ದಾಣದ ಬಳಿ ಹಳಿ ತಪ್ಪಿದೆ.
ಅಪಘಾತದಲ್ಲಿ ಒಂದು ಬ್ರೇಕ್ ವ್ಯಾನ್ ಮತ್ತು ಎರಡು ಬೋಗಿಗಳು ಹಳಿ ತಪ್ಪಿವೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ರೈಲ್ವೆ ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದಾರೆ