ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂತಹ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದಂತ ಕಾರ್ಯಕ್ರಮದಲ್ಲೇ ಭದ್ರತಾ ವೈಫಲ್ಯ ಉಂಟಾಗಿರುವುದು ಕಂಡು ಬಂದಿದೆ. ಯುವಕನೊಬ್ಬ ವೇದಿಕೆಯ ಬಳಿಗೆ ನುಗ್ಗಿ ಬಂದಾಗ, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ “ಮುಖ್ಯಮಂತ್ರಿಗಳಿಗೆ ನಮ್ಮಭಿಮಾನದ ಅಭಿನಂದನೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಾಲ್ಗೊಂಡು, ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ. ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರುತ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಇದು ನಿಮ್ಮೆಲ್ಲರ ಸರ್ಕಾರ. ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.
ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮಸಮಾಜದ ಕನಸು ಕಂಡಿದ್ದರು. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ. ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಸ್ಥ ಸಮಾಜ ರೂಪಿಸಬೇಕಿದೆ ಎಂದರು.
ನಿಮ್ಮೆಲ್ಲರ ಬೇಡಿಕೆಯಂತೆ ಹಳೆ ಪಿಂಚಣಿ ಪದ್ಧತಿ ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದರು.
ಹೀಗೆ ಸಿಎಂ ಸಿದ್ಧರಾಮಯ್ಯ ಭಾಷಣ ಮುಗಿಯುತ್ತಿದ್ದಂತೇ, ಭದ್ರತೆಯನ್ನು ಮೀರಿ ಯುವಕನೊಬ್ಬ ಸಿಎಂ ಸಿದ್ಧರಾಮಯ್ಯ ಅವರ ವೇದಿಕೆಯತ್ತ ನುಗ್ಗಿ ಬಂದನು. ವೇದಿಕೆಯ ಮೇಲೆ ನುಗ್ಗಲು ಯತ್ನಿಸಿದಂತ ಯುವಕನನ್ನು ಸ್ಥಳದಲ್ಲಿದ್ದಂತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದ ಸಿಎಂ ಸಿದ್ಧರಾಮಯ್ಯ ಕಾಲಿಗೆ ಬೀಳಲು ವೇದಿಕೆಗೆ ನುಗ್ಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಅಲ್ಲದೇ ಆತ ಮದ್ಯಸೇವಿಸಿದ್ದ, ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ.
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ