ಬೆಂಗಳೂರು: ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದಂತ ಪ್ರಜಾಪ್ರಭುತ್ವ ನಡಿಗೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮದ ವೇಳೆಯಲ್ಲಿ ದಿಢೀರ್ ವ್ಯಕ್ತಿಯೊಬ್ಬ ನುಗ್ಗಿ ಬಂದಿದ್ದರು. ಇಂತಹ ವ್ಯಕ್ತಿಯ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಸಿಎಂ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದಂತ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಪ್ರಕಣ ಸಂಬಂಧ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಆರೋಪಿ ಮಹದೇವ್ ನಾಯಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕನಕಪುರ ಮೂಲದ ಮಹದೇವ್ ನಾಯಕ್ ವಿರುದ್ಧ ವಿಧಾನಸೌಧ ಬಿಎನ್ಎಸ್ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಂದಹಾಗೇ ಆರೋಪಿ ಮಹದೇವ್ ನಾಯಕ್ ಅವರು ಖಾಸಗಿ ಶೋ ರೂಂ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಿಗಿ ಭದ್ರತೆಯ ನಡುವೆಯೂ ಸಿಎಂ ವೇದಿಕೆಯತ್ತ ನುಗ್ಗುವ ಮೂಲಕ ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಗಿದ್ದನು. ಈ ಹಿನ್ನಲೆಯಲ್ಲಿ ಆತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ವಶಕ್ಕೆ ಪಡೆದು, ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ಅರವಿಂದ್ ಕೇಜ್ರಿವಾಲ್ ರಾಜೀನಾಮೆ: ಇಲ್ಲಿದೆ ದೆಹಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
BREAKING : ಎರಡು ದಿನಗಳಲ್ಲಿ `CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ