ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಮತಯಾಚನೆ ಮಾಡಿದಂತ ವೇಳೆಯಲ್ಲಿ ಭದ್ರತಾ ವೈಫಲ್ಯಕ್ಕೆ ಕಾರಣವಾಗಿದೆ. ಗನ್ ಇಟ್ಕೊಂಡು ಬಂದಂತ ವ್ಯಕ್ತಿಯೊಬ್ಬ ಸಿಎಂ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿ ತೆರಳಿರೋ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಇಂದು ಸಿಎಂ ಸಿದ್ಧರಾಮಯ್ಯ ಪ್ರಚಾರ ನಡೆಸಿದರು. ಬೆಂಗಳೂರಿನ ಭೈರಸಂದ್ರದಲ್ಲಿ ಇಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಭದ್ರತಾ ವೈಫಲ್ಯವೇ ನಡೆದಿದೆ.
ಸಿಎಂ ಸಿದ್ಧರಾಮಯ್ಯ ಕ್ಯಾಂಟರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಪ್ರಚಾರದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿ ಕ್ಯಾಂಟರ್ ಏರಿ ಬಂದಂತ ವ್ಯಕ್ತಿಯೊಬ್ಬನ ಸೊಂಟದಲ್ಲಿ ಗನ್ ಇತ್ತು ಎಂಬುದಾಗಿ ತಿಳಿದು ಬಂದಿದೆ. ಹೀಗೆ ಗನ್ ಇಟ್ಕೊಂಡು ಬಂದಂತ ವ್ಯಕ್ತಿಯೊಬ್ಬ ಸಿಎಂ ಸಿದ್ಧರಾಮಯ್ಯಗೆ ಹಾರ ಹಾಕಿ ತೆರಳಿರೋದಾಗಿ ಹೇಳಲಾಗುತ್ತಿದೆ.
ಹೀಗೆ ಚುನಾವಣಾ ಪ್ರಚಾರದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಗನ್ ಇಟ್ಕೊಂಡು ಬಂದು ಹಾರ ಹಾಕಿದ ವ್ಯಕ್ತಿ ಯಾರು.? ಆತನ ಬಗ್ಗೆ ಪೊಲೀಸರಿಗೆ ಮಾಹಿತಿ ಇರಲಿಲ್ವ? ಆತ ಗನ್ ಲೈಸೆನ್ಸ್ ಹೊಂದಿದ್ದನೋ ಅಥವಾ ಇಲ್ವೋ ಎನ್ನುವ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
BREAKING NEWS : 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ !