ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ಭುಗಿಲೆದ್ದ ಭೀಕರ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಹಡಿಪೋರಾ-ಬಾರಾಮುಲ್ಲಾ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ.
OP HADIPORA, #Sopore
On specific intelligence input regarding presence of terrorists, a Joint Operation was launched by #IndianArmy & @JmuKmrPolice today in Hadipora area of PD Sopore; two terrorists eliminated, operation in progress.#Kashmir@adgpi@NorthernComd_IA pic.twitter.com/JKnBTbekFb
— Chinar Corps🍁 – Indian Army (@ChinarcorpsIA) June 19, 2024
ಬಾರಾಮುಲ್ಲಾ ಜಿಲ್ಲೆಯ ವಾಟರ್ಗಾಮ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಕಾರ್ಯಾಚರಣೆ ಪ್ರಾರಂಭವಾಯಿತು.
ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು, ಭಯೋತ್ಪಾದಕರು ಸೈನಿಕರ ಮೇಲೆ ಗುಂಡು ಹಾರಿಸಿದಾಗ, ಪ್ರತಿದಾಳಿಯನ್ನು ನಡೆಸಲಾಯಿತು. ಈ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
“ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಇಂದು ಬೆಳಿಗ್ಗೆ ಬಾರಾಮುಲ್ಲಾ ಜಿಲ್ಲೆಯ ವಾಟರ್ಗಾಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಭಯೋತ್ಪಾದಕರು ನಮ್ಮ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದಾಗ ಕಾರ್ಯಾಚರಣೆ ಎನ್ಕೌಂಟರ್ ಆಗಿ ಮಾರ್ಪಟ್ಟಿತು. ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ – ಪೊಲೀಸ್ ಕಾನ್ಸ್ಟೇಬಲ್ ಮತ್ತು ಸೇನಾ ಜವಾನ್ ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
BREAKING: ICSE, ISC ಸುಧಾರಣಾ ಪರೀಕ್ಷೆ 2024ರ ವೇಳಾಪಟ್ಟಿ ಪ್ರಕಟ | ICSE, ISC improvement exam 2024