Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪ್ರಧಾನಿ ಮೋದಿ 12 ವರ್ಷಗಳ ಐತಿಹಾಸಿಕ ಸಾಧನೆ: ಇಂದು ‘ಭಾರತ ಮಂಡಪ’ದಲ್ಲಿ ಎನ್‌ಡಿಎ ಮುಖ್ಯಮಂತ್ರಿಗಳ ಮಹತ್ವದ ಸಭೆ

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

GOOD NEWS : ಕ್ಯಾನ್ಸರ್‌ ರೋಗಿಗಳಿಗೆ ಸಿಕ್ತು ಸಂಜೀವಿನಿ : ರೋಗಿಗಳ ಜೀವಿತಾವಧಿ ದ್ವಿಗುಣಗೊಳಿಸಬಲ್ಲ ಹೊಸ ಮಾತ್ರೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗದ ಹೊಸನಗರದಲ್ಲಿ ಅಕ್ರಮವಾಗಿ ಮಣ್ಣಿನಲ್ಲಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಬೀಟೆ ಮರದ ತುಂಡುಗಳನ್ನು ವಶಕ್ಕೆ
KARNATAKA

ಶಿವಮೊಗ್ಗದ ಹೊಸನಗರದಲ್ಲಿ ಅಕ್ರಮವಾಗಿ ಮಣ್ಣಿನಲ್ಲಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಬೀಟೆ ಮರದ ತುಂಡುಗಳನ್ನು ವಶಕ್ಕೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಅಕ್ರಮವಾಗಿ ಮಣ್ಣಿನಲ್ಲಿ ಮುಚ್ಚಿಡಲಾಗಿದ್ದ ಬೀಟೆ ಜಾತಿಯ ಮರದ ನಾಟಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿ, ಜಪ್ತಿ ಮಾಡಿದ್ದಾರೆ. ಈ ಸಂಬಂಧ ಹೊಸನಗರ ವಲಯ ಅರಣ್ಯ ಕಚೇರಿಯಲ್ಲಿ ಮೊಕದ್ದಮೆ ದಾಖಲಾಗಿದೆ.

ಘಟನೆಯ ವಿವರ

ಖಚಿತ ಮಾಹಿತಿ ಮೇರೆಗೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿ, ನಂದ್ರಿ ಗ್ರಾಮದ ಸರ್ವೆ ನಂಬರ್ 15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿನ ಒತ್ತುವರಿ ಜಮೀನಿನಲ್ಲಿರುವ ಕೃಷಿ ಹೊಂಡದ ಪಕ್ಕದಲ್ಲಿ, ಅಂದಾಜು 2 ರಿಂದ 3 ವರ್ಷಗಳ ಹಿಂದೆ ಕಡಿತಲೆ ಮಾಡಲಾಗಿದ್ದ 14 ಬೀಟೆ ಜಾತಿಯ ಮರದ ನಾಟದ ತುಂಡುಗಳನ್ನು ಮಣ್ಣಿನಲ್ಲಿ ಮುಚ್ಚಿ ಅಕ್ರಮವಾಗಿ ದಾಸ್ತಾನು ಮಾಡಿಟ್ಟಿರುವುದು ಪತ್ತೆಯಾಗಿದೆ. ಸದ್ಯ ಈ ಎಲ್ಲಾ ಬೀಟೆ ಮರದ ತುಂಡುಗಳನ್ನು ಅರಣ್ಯ ಇಲಾಖೆಯು ತನ್ನ ವಶಕ್ಕೆ (ಅಮಾನತ್ತು) ಪಡೆದುಕೊಂಡಿದೆ. ಇದರ ಮೌಲ್ಯ 6.50 ಲಕ್ಷಕ್ಕೂ ಹೆಚ್ಚು ಎಂದು ಹೇಳಲಾಗುತ್ತಿದೆ.

ಆರೋಪಿ ತಲೆಮರೆಸು

ಈ ಅಕ್ರಮ ಕೃತ್ಯವೆಸಗಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಟೌನ್‌ನ ಮಂಡಿಬೆಲೆ ರಸ್ತೆ ನಿವಾಸಿಯಾದ ಗಣೇಶ ಬಿನ್ ಬಾಬುಶೆಟ್ಟಿ (40 ವರ್ಷ) ಎಂಬಾತನನ್ನು ಪ್ರಮುಖ ಆರೋಪಿ (A1) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963 ಮತ್ತು ಕರ್ನಾಟಕ ಅರಣ್ಯ ಕಾನೂನು 1969ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಿನಾಂಕ 18-05-2026 ರಿಂದ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಗ್ಗೆ ಸಿಗುವ ಖಚಿತ ಮಾಹಿತಿಯ ಮೇರೆಗೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡ

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿ ನವೀನ ಕುಮಾರ್ ಸಿ.ಎಂ., ಗಸ್ತು ಅರಣ್ಯ ಪಾಲಕರಾದ ಪ್ರಶಾಂತ ಜಿ., ಪುಟ್ಟಸ್ವಾಮಿ ಕೆ.ವಿ., ಗಿರೀಶ್ ಎಸ್. ಹಾಗೂ ಇಲಾಖೆಯ ಸಿಬ್ಬಂದಿಗಳಾದ ಸುರೇಶ, ಪುನೀತ್, ಮಹೇಶ ಹೆಚ್.ಜಿ. ಸೇರಿದಂತೆ ಇತರರು ಭಾಗವಹಿಸಿದ್ದರು.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

ರಾಜ್ಯದಲ್ಲೊಂದು ದಾರುಣ ಘಟನೆ: ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ದುರ್ಮರಣ

BIG NEWS: ದುಬಾರೆಯಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ‘ಕಂಜನ್’ ದಸರಾ ಜಂಬೂಸವಾರಿಯಿಂದ ಔಟ್!

Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

1 Min Read

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

1 Min Read
Recent News

​ಪ್ರಧಾನಿ ಮೋದಿ 12 ವರ್ಷಗಳ ಐತಿಹಾಸಿಕ ಸಾಧನೆ: ಇಂದು ‘ಭಾರತ ಮಂಡಪ’ದಲ್ಲಿ ಎನ್‌ಡಿಎ ಮುಖ್ಯಮಂತ್ರಿಗಳ ಮಹತ್ವದ ಸಭೆ

BIG NEWS : ವಿವಾಹಪೂರ್ವ ಲೈಂಗಿಕ ಸಂಬಂಧ ಚಾರಿತ್ರ್ಯವನ್ನು ನಿರ್ಣಯಿಸಲು ಮಾನದಂಡವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

GOOD NEWS : ಕ್ಯಾನ್ಸರ್‌ ರೋಗಿಗಳಿಗೆ ಸಿಕ್ತು ಸಂಜೀವಿನಿ : ರೋಗಿಗಳ ಜೀವಿತಾವಧಿ ದ್ವಿಗುಣಗೊಳಿಸಬಲ್ಲ ಹೊಸ ಮಾತ್ರೆ!

​12 ವರ್ಷಗಳ ಆಡಳಿತ: ಭಾರತದ ಸುದೀರ್ಘಾವಧಿಯ ಪ್ರಧಾನಿಯಾಗಿ ನರೇಂದ್ರ ಮೋದಿ ದಾಖಲೆ

State News
KARNATAKA

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು…

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.