Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಾಕಿಸ್ತಾನದ ವಿರುದ್ಧ ಅಫ್ಘಾನಿಸ್ತಾನ ಪ್ರತೀಕಾರ, ಹಲವು ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ

27/02/2026 3:12 PM

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಟಿ ರಶ್ಮಿಕಾ-ವಿಜಯ್

27/02/2026 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪತ್ರಿಕೋದ್ಯಮ ಪ್ರಶಸ್ತಿ’ಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿಗೆ ‘ನಾಮ ನಿರ್ದೇಶನ’ಕ್ಕೆ ಅರ್ಜಿ ಆಹ್ವಾನ
KARNATAKA

‘ಪತ್ರಿಕೋದ್ಯಮ ಪ್ರಶಸ್ತಿ’ಗಳಿಗೆ ಆಯ್ಕೆ ಸಮಿತಿ ರಚನೆ: ಪ್ರಶಸ್ತಿಗೆ ‘ನಾಮ ನಿರ್ದೇಶನ’ಕ್ಕೆ ಅರ್ಜಿ ಆಹ್ವಾನ

By kannadanewsnow0902/07/2024 9:56 PM

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆ ಸಮಿತಿ

ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್.ಮಣಿ ಸದಸ್ಯರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ

ಕನ್ನಡದ ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ಟಿಯೆಸ್ಸಾರ್ ನಿಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ 2 ಲಕ್ಷ ರೂ ಆಗಿದ್ದು, ಕನ್ನಡ ಪತ್ರಿಕೋದ್ಯಮ, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ 30 ವರ್ಷಗಳ ಸೇವೆ ಸಲ್ಲಿಸಿರಬೇಕು. ಜೊತೆಗೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರತಿ ಕ್ಯಾಲೆಂಡರ್ ವರ್ಷಕ್ಕೆ ಒಬ್ಬರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುವುದು.

ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ

ಪತ್ರಿಕಾ ರಂಗದ ಭೀಷ್ಮರೆಂದೇ ಹೆಸರಾದ ಮೊಹರೆ ಹಣಮಂತರಾಯ ಅವರ ನೆನಪಿನಲ್ಲಿ ಸರ್ಕಾರವು ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತವು 2 ಲಕ್ಷ ರೂ ಆಗಿದ್ದು, ಕನ್ನಡದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ, ವೃತ್ತಿಯಲ್ಲಿ ಪತ್ರಿಕಾಲಯದ ಮಾಲೀಕರು, ಆಡಳಿತಗಾರರಾಗಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು.

ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು, ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪೂರ್ಣ ದಾಖಲೆಗಳೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರರಸ್ತೆ, ಬೆಂಗಳೂರು – 560 001 ಇಲ್ಲಿಗೆ 2024ನೇ ಜುಲೈ 25ರ ಸಂಜೆ 5.30 ಗಂಟೆ ಒಳಗಾಗಿ ಕಳುಹಿಸಿಕೊಡಬಹುದಾಗಿದೆ. ಅಥವಾ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ ಮೂಲಕ ಇಲ್ಲವೇ tsraward@gmail.com ಇಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿಕೊಡಬಹುದಾಗಿದೆ.

ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ | Pourakarmikas

ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ವಾರಕ್ಕೆ ಒಂದು ದಿನ ರಜೆ ನೀಡಿ ರಾಜ್ಯ ಸರ್ಕಾರ ಆದೇಶ | Pourakarmikas

BIG UPDATE: ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರಂತ: 116 ಮಂದಿ ಸಾವು, 18 ಜನರಿಗೆ ಗಾಯ | Hathras Tragedy

Share. Facebook Twitter LinkedIn WhatsApp Email

Related Posts

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM2 Mins Read

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM2 Mins Read

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM2 Mins Read
Recent News

BREAKING : ಪಾಕಿಸ್ತಾನದ ವಿರುದ್ಧ ಅಫ್ಘಾನಿಸ್ತಾನ ಪ್ರತೀಕಾರ, ಹಲವು ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ

27/02/2026 3:12 PM

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಟಿ ರಶ್ಮಿಕಾ-ವಿಜಯ್

27/02/2026 2:52 PM

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM
State News
KARNATAKA

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

By kannadanewsnow0927/02/2026 2:57 PM KARNATAKA 2 Mins Read

ತುಮಕೂರು: ಕಾಲೇಜಿಗೆ ಹೋಗಿ ಸಂಜೆ ಮನೆಗೆ ವಾಪಾಸ್‌ ಬರುವ ವೇಳೆ ವಿದ್ಯಾರ್ಥಿನಿಯನ್ನು ಎಳೆದಾಡಿ ಬಲವಂತಾಗಿ ಮುತ್ತಿಟ್ಟು ಅಸಭ್ಯವಾಗಿ ವರ್ತಿಸಿದ ಯುವಕನ…

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM

SHOCKING: ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕುವಿನಿಂದ ಇರಿದ ಪ್ರೇಯಸಿ

27/02/2026 2:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.