ಕಲಬುರಗಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಅನುದಾನದಡಿ ಬೆಂಗಳೂರಿನ ನಾರಾಯಣ ಹೃದಯಾಲಯ ಇವರ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಜನರಿಗೆ ಆರೋಗ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳಿಗೆ ಬೆಂಗಳೂರಿನ ಬೊಮ್ಮಸಂದ್ರದ ನಾರಾಯಣ ಹೃದಯಾಲಯದಲ್ಲಿ ವಸತಿ ಸಹಿತವಾಗಿ 6 ತಿಂಗಳ ಕಾಲ ತರಬೇತಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಮಾಸಿಕ 500 ರೂ.ಗಳ ಶಿಷ್ಯವೇತನ ನೀಡಲಾಗುತ್ತದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಕುರಿತು ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ವಿಳಾಸದ ಕುರಿತ ದಾಖಲೆ, ಪಾಸ್ಪೋಟ್ ಸೈಜ್ ಫೋಟೋ ಹಾಗೂ ಆಧಾರ್ ಕಾರ್ಡ್ ಪ್ರತಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯದ ಕೌಸಲ್ಯಾ ದೇವಿ ಇವರ ಮೊಬೈಲ್ ಸಂಖ್ಯೆ 8525808078, ವ್ಯವಸ್ಥಾಪಕರಾದ ವಿಕಾಸ್ ಇವರ ಮೊಬೈಲ್ ಸಂಖ್ಯೆ 7018879650 ಹಾಗೂ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.