ಮಹಾರಾಷ್ಟ್ರ: ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪಕ್ಷದ ಚುನಾವಣಾ ಚಿಹ್ನೆ ಕುರಿತು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ.
ನೈಜ ಶಿವಸೇನೆ ಎಂದು ಗುರುತಿಸುವ ಏಕನಾಥ್ ಶಿಂಧೆ ಬಣದ ಕ್ರಮದ ಮೇಲೆ ಚುನಾವಣಾ ಆಯೋಗದ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡುವಂತೆ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
BIGG BREAKING NEWS : ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ 14 ದಿನಗಳ ನಂತರ ಪ್ರತ್ಯಕ್ಷ!
ಪಕ್ಷದ ಶ್ರೇಣಿಯಲ್ಲಿನ ಬಂಡಾಯವು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿದ ನಂತರ ಮತ್ತು ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ಪದಚ್ಯುತಗೊಳಿಸಿದ ನಂತರ ಚಿಹ್ನೆಗಾಗಿ ಜಗಳ ಆರಂಭವಾಗಿದೆ.
ಬಿಜೆಪಿಯ ಜೊತೆಗೆ ಸೇರಿಕೊಂಡು ಈಗಾಗಲೇ ಏಕನಾಥ್ ಶಿಂಧೆ ನೂತನ ಸರ್ಕಾರ ರಚನೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ. ಮುಖ್ಯಮಂತ್ರಿ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ಆಗಿ ದೇವೇಂದ್ರ ಫಡ್ನವೀಸ್ ಅಧಿಕಾರ ಸ್ವೀಕರಿಸಿದ್ದೂ ಆಗಿದೆ. ಆದರೆ ಇದರ ಮಧ್ಯೆ ಶಿವಸೇನೆಯ ನಿಜವಾದ ಚಿಹ್ನೆ ಮತ್ತು ನಾಯಕತ್ವ ಯಾರಿಗೆ ಒಲಿಯಲಿದೆ ಎಂಬುದು ಪ್ರಶ್ನಾತ್ಮಕವಾಗಿದೆ. ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನಡುವೆ ಶಿವಸೇನೆ ಮುಖ್ಯಸ್ಥ ಸ್ಥಾನ ಮತ್ತು ಪಕ್ಷದ ಚಿಹ್ನೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ.