ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಎ.ಎಸ್ ಬಸವರಾಜು ಅವರು ಇಂದು ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದಂತ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಬಿಜೆಪಿಯ ಹಿರಿಯ ನಾಯಕರಾಗಿದ್ದಂತ ಎ.ಎಸ್ ಬಸವರಾಜು ಅವರು, ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ 2004 ರಿಂದ 2007ರವರೆಗೆ ಶಾಸಕರಾಗಿದ್ದರು. ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿಯೂ ಗುರ್ತಿಸಿಕೊಂಡಿದ್ದರು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅವರು, ಇಂದು ಚಿಕಿತ್ಸೆ ಫಲಿಸದೇ ವಿಧಿವಶರಾಗಿರುವುದಾಗಿ ತಿಳಿದು ಬಂದಿದೆ.
ಇಂದು ನಿಧನರಾದಂತ ಬಿಜೆಪಿ ಹಿರಿಯ ನಾಯಕ ಎಎಸ್ ಬಸವರಾಜು ಅವರನ್ನು ನಾಳೆ ಅರಸೀಕೆರೆಯ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎನ್ನಲಾಗುತ್ತಿದೆ.
BIGG NEWS: ‘KPTCL 226 ಜೆಇ ವರ್ಗಾವಣೆ’ಯಲ್ಲಿ ಮತ್ತೊಂದು ಕರ್ಮಕಾಂಡ: ಪುಲ್ ‘ಡೀಲ್ ಮಗಾ’ ಡೀಲ್
GOOD NEWS : 545 ‘PSI’ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ಪತ್ರ ವಿತರಣೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ