ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ಅವರು ವಿಧಿವಶರಾಗಿದ್ದಾರೆ. ‘ಕರ್ನಾಟಕದ ಇಂದಿರಾ ಗಾಂಧಿ’ ಎಂದು ಖ್ಯಾತರಾಗಿದ್ದ ನಾಗಮ್ಮ ಕೇಶವಮೂರ್ತಿ (90) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಅಂದ ಹಾಗೇ ನಾಗಮ್ಮ 1972, 1978 ಮತ್ತು 1989ರಲ್ಲಿ ಮೂರು ಬಾರಿ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿದ್ದರು. ಗುಂಡೂರಾವ್, ಬಂಗಾರಪ್ಪ ಹಾಗೂ ವೀರಪ್ಪ ಮೊಯ್ಲಿ ಸಂಪುಟದಲ್ಲಿ ಬೃಹತ್ ಕೈಗಾರಿಕೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವೆಯಾಗಿ ಹಾಗೂ ವಿಧಾನಸಭೆ ಉಪಸಭಾಪತಿಯಾಗಿಯೂ ಕಾರ್ಯ ನಿರ್ವಹಿಸಿದ್ದರು ಕೂಡ. ಈ ನಡುವೆ ಇಂದುಮಧ್ಯಾಹ್ನ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.